ಕನ್ನಡ ಧ್ವಜಕ್ಕೆ ಸಾಂವಿಧಾನಿಕ ಸ್ಥಾನಮಾನ: ನಾಳಿನ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ

ಬೆಂಗಳೂರು, ಫೆ.26-ಕನ್ನಡ ಧ್ವಜಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ಸಂಬಂಧ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ನಾಡಧ್ವಜಕ್ಕೆ ಸಂಬಂಧಿಸಿದಂತೆ ಹೊಸ ಕಾನೂನು ರಚನೆ ಮಾಡಲು ನಾಳಿನ ಸಂಪುಟ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ. ನಾಡಧ್ವಜಕ್ಕೆ ಸಂಬಂಧಿಸಿದಂತೆ ರಚಿಸಿರುವ ಸಮಿತಿ ನೀಡಿರುವ ವರದಿ ಅನ್ವಯ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸುವ ಸಂಬಂಧ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದೆ.

ಚುನಾವಣಾ ಸಂದರ್ಭದಲ್ಲಿ ಕನ್ನಡದ ಅಸ್ಮಿತೆಯ ಲಾಭ ಪಡೆಯಲು ನಿರ್ಧರಿಸಿರುವ ಸರ್ಕಾರ, ಕನ್ನಡ ನಾಡಿಗೆ ಪ್ರತ್ಯೇಕ ಧ್ವಜದ ಮಾನ್ಯತೆ ಪಡೆಯಲು ಮುಂದಾಗಿದ್ದು, ಈ ಸಂಬಂಧ ಸಮಿತಿ ರಚಿಸಿದ್ದು, ಸಮಿತಿ ಈಗಾಗಲೇ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ.

ಅದರ ಅನ್ವಯ ಸಮಿತಿ ನೀಡಿರುವ ವರದಿಯಂತೆ ಹೊಸ ಸ್ವರೂಪದ ಧ್ವಜಕ್ಕೆ ಕಾನೂನು ಮಾನ್ಯತೆ ನೀಡಬೇಕೇ ಅಥವಾ ಈಗಿರುವ ಧ್ವಜವನ್ನೇ ಮುಂದುವರೆಸಬೇಕೆಂಬ ಎಂಬ ಬಗ್ಗೆ ಸಂಪುಟದಲ್ಲಿ ಕಾನೂನು ರೂಪಿಸುವ ಸಾಧ್ಯತೆ ಇದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ