ಹಾರ್ಟ್ ಅಟ್ಯಾಕ್ ನಿಂದಲೇ ನಟಿ ಶ್ರೀದೇವಿ ಸಾವು: ದುಬೈನ ಫೋರೆನ್ಸಿಕ್ ಲ್ಯಾಬ್ ಸ್ಪಷ್ಟನೆ

ದುಬೈ:ಫೆ-26; ಸಂಬಂಧಿಕರ ವಿವಾಹ ಸಮಾರಂಭಕ್ಕೆ ದುಬೈಗೆ ತೆರಳಿದ್ದ ನಟಿ ಶ್ರೀದೇವಿ ಸಾವಿನ ಬಗ್ಗೆ ಹಲವಾರು ಊಹಾಪೂಹಗಳು ಹರಡುತ್ತಿರುವ ನಡುವೆಯೇ ವಿಧಿ ವಿಜ್ನಾನ ಪ್ರಯೋಗಾಲಯ ಹೃದಯಾಘಾತದಿಂದಲೇ ಶ್ರೀದೇವಿ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಇಂದು ಮಧ್ಯಾಹ್ನ 2 ಗಂಟೆಯ ವೇಳೆಗೆ ಮರಣೋತ್ತರ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಭಾಷಾ ನಟಿ ಶ್ರೀದೇವಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿರುವುದಾಗಿ ತಿಳಿದುಬಂದಿದೆ.

ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ನಲ್ಲಿ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಾರ್ಥಿವ ಶರೀರವನ್ನು ಪೊಲೀಸರಿಗೆ ಒಪ್ಪಿಸಿ ಕೆಲವು ದಾಖಲೆಗಳ ತಪಾಸಣೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು. ಆ ನಂತರ ಶ್ರೀದೇವಿ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ದುಬೈ ಕಾನೂನಿನ ಪ್ರಕಾರ ಶವ ಪರೀಕ್ಷೆ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ನೀಡುವ ವ್ಯವಸ್ಥೆ ಇದೆ.
ದುಬೈನಿಂದ ಶ್ರೀದೇವಿ ಪಾರ್ಥಿವ ಶರೀರವನ್ನು ಅನಿಲ್‌ ಅಂಬಾನಿ ಅವರ ಖಾಸಗಿ ವಿಮಾನದಲ್ಲಿ ಮುಂಬೈಗೆ ಕರೆತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Forensic report says, Sridevi died of heart attack, Dubai

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ