ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ.
ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ತಿಪಟೂರಿನ ಸ್ಟೆಲ್ಲಾ ಮೇರಿಸ್ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಹೊನ್ನಗೌರಿ ಪರೀಕ್ಷೆಯ ಭಯದಿಂದ ಖಿನ್ನತೆಗೊಳಗಾಗಿದ್ದರು. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಪೊಷಕರು ಎಲ್ಲಿ ಬೈಯ್ಯುತ್ತಾರೋ ಎಂದು ಹೆದರಿ ಪರೀಕ್ಷೆಗೂ ಮುನ್ನವೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಆಕ್ರಂದನ: ಮಗಳನ್ನು ಕಳೆದುಕೊಂಡ ಪೊಷಕರ ಆಕ್ರಂದನ ಮುಗಿಲುಮುಟ್ಟಿತ್ತು.
ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.