ಬಾಗಲಕೋಟೆ,ಫೆ.26- ಯುವಕರು ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ನಾಗರಿಕ ಸಮಸ್ಯೆಗಳಿಗೆ ಸ್ಪಂದಿಸುವಂತೆ ಪಕ್ಷದ ಮುಖಂಡರು ಮತ್ತು ಶಾಸಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದರು.
ನಗರದ ನ್ಯೂಐಬಿಯಲ್ಲಿ ಗದಗ, ಹಾವೇರಿ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಸಚಿವರ, ಮಾಜಿ ಸಚಿವರ, ಹಾಲಿ ಹಾಗೂ ಮಾಜಿ ಶಾಸಕರ, ಸಂಸದರ ಸಭೆ ನಡೆಸಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪಕ್ಷವನ್ನು ಸದೃಢಗೊಳಿಸಲು ಕ್ಷೇತ್ರದಲ್ಲಿದ್ದುಕೊಂಡು ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ತಿಳಿಸಿ ಹೇಳಿರಿ ಎಂದು ಕರೆ ನೀಡಿದರು.
ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸೂಚಿಸಿದ ಅವರು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪೆÇರಮೇಶ್ವರ್, ಬಾಗಲಕೋಟೆ ಜಿಲ್ಲೆ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ, ಗದಗ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್, ಸೇರಿದಂತೆ ಪಕ್ಷದ ಮುಖಂಡರು ಪಧಾಧಿಕಾರಿಗಳು ಸಭೆಯಲಲಿ ಉಪಸ್ಥಿತಿರದ್ದರು.
ಇದೇ ಸಂದರ್ಭದಲ್ಲಿ ಮಾಹಾಕೊಂಡ ಕ್ಷೇತ್ರದ ಕಾಂಗ್ರೆಸ್ ಮುಖಂಡ ಶಿವಮೂರ್ತಿ ಅವರು ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕುರಿತ ಪುಸ್ತಕವನ್ನು ಮೆರವಣಿಗೆ ಮಾಡುವಂತೆ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದರು.
ಸಭೆಯ ಹಿನ್ನಲೆಯಲ್ಲಿ ಐಬಿ ಸುತ್ತ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಪಟ್ಟಿಯಲ್ಲಿ ಹೆಸರಿಲ್ಲದ ಕೆಲವರನ್ನು ಸಭೆಯೊಳಗೆ ಬಿಡಲು ಎಸ್ಪಿಜಿಯವರು ನಿರಾಕರಿಸಿದರು. ಕಾಂಗ್ರೆಸ್ ಮುಖಂಡರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮುಕಿಯೂ ನಡೆಯಿತು.
ಸಚಿವರ ಪ್ರವೇಶಕ್ಕೆ ಅಡ್ಡಿ : ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಸಚಿವ ಆರ್.ಬಿ. ತಿಮ್ಮಾಪುರ ಅವರನ್ನು ಸಹ ಒಳಗೆ ಬಿಡಲು ನಿರಾಕರಿಸಲಾಯಿತು.
20 ನಿಮಿಷ ಅವರನ್ನು ಎಸ್ಪಿಜಿ ತಂಡದವರು ತಡೆದರು. ನಂತರ ಪರಿಶೀಲಿಸಿ ಒಳಗೆ ಬಿಟ್ಟರು. ಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.