ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಮಹದಾಯಿ ವಿವಾದ ಇತ್ಯರ್ಥ: ಅಮಿತ್ ಶಾ ಭರವಸೆ

ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ತಿಳಿಸಿದರು.

ಇದೇವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ, ರಾಜ್ಯದಲ್ಲಿ ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚುತ್ತಿವೆ. ಸಿದ್ದರಾಮಯ್ಯ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರವೆಂದರೆ ಸಿದ್ದರಾಮಯ್ಯ ಎನ್ನುವಷ್ಟರ ಮಟ್ಟಿಗೆ ಈ ಎರಡೂ ಶಬ್ದಗಳು ಅನ್ವರ್ಥವಾಗಿವೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧವೂ ಗುಡುಗಿದ ಶಾ 5 ದಶಕಗಳ ಕಾಲ ರಾಜಕೀಯ ಮಾಡಿದ್ದ ಈ ಪ್ರದೇಶ ಇನ್ನು ಹಿಂದುಳಿದಿದೆ. ಖರ್ಗೆ ತಮ್ಮದೇ ಕ್ಷೇತ್ರವನ್ನು ಅಭಿವೃದ್ಧಿಪಡಿಸಿಲ್ಲ ಇದು ಕಾಂಗ್ರೆಸ್ ಆಡಳಿತದ ವೈಖರಿಯಾಗಿದೆ ಎಂದು ಟೀಕಿಸಿದರು.

ರಾಜ್ಯದ ಜನತೆ ಸಿದ್ದರಾಮಯ್ಯ ಸರ್ಕಾರ ಬದಲಿಸಲು ಚಿಂತನೆ ನಡೆಸಿದ್ದಾರೆ. ರಾಜ್ಯದ ಎಲ್ಲೆಡೆ ಬಿಜೆಪಿ ಪರ ಗಾಳಿ ಬೀಸತೊಡಗಿದೆ. ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.
Karnataka Assembly Elections-2018, Amit Shah,kalaburgi,mahadai-dispute

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ