ಬೆಂಗಳೂರು,ಫೆ.26- ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಿರಣ್ಕುಮಾರ್ ಸ್ನೇಹಿತರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಯುವಕ.
ರಾತ್ರಿ ಮೂವರು ಸ್ನೇಹಿತರೊಂದಿಗೆ ಕಿರಣ್ಕುಮಾರ್ ಹೆಸರುಘಟ್ಟ ಮುಖ್ಯರಸ್ತೆಯ ಬಾರ್ಗೆ ಹೋಗಿದ್ದಾನೆ. 11.30ರ ಸಮಯದಲ್ಲಿ ಬಾರ್ನಿಂದ ಹೊರಗೆ ಬಂದಾಗ ಕ್ಷುಲ್ಲಕ ವಿಚಾರವಾಗಿ ಇವರ ನಡುವೆ ಜಗಳ ನಡೆದಿದೆ.
ಈ ವೇಳೆ ಮಾತಿಗೆ ಮಾತು ಬೆಳೆದು ಜೊತೆಯಲ್ಲಿದ್ದವರು ಕಿರಣ್ಕುಮಾರ್ನ ಮೇಲೆ ಹಲ್ಲೆ ನಡೆಸಿ ಕಲ್ಲಿನಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ಕುಮಾರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಬಗಲಗುಂಟೆ ಪೊಲೀಸರು, ಹಲ್ಲೆ ನಡೆಸಿ ಪರಾರಿಯಾಗಿರುವವರ ಬಂಧನಕ್ಕೆ ಶೋಧ ಕೈಗೊಂಡಿದ್ದಾರೆ.