ಸವದತ್ತಿ,ಫೆ.26- ಮಹದಾಯಿ ಜಲವಿವಾದ ಕುರಿತಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸೇನಾದವರು ಇಂದು ಅಧ್ಯಕ್ಷ ವೀರೇಶ ಸೊರಬದ ಮಠ ಅವರ ನೇತೃತ್ವದಲ್ಲಿ ಧರಣಿ ನಡೆಸಿದರು.
ಎರಡನೇ ಹಂತದ ಜನಾರ್ಶೀವಾದ ಯಾತ್ರೆ ಅಂಗವಾಗಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಗರಕ್ಕೆ ಆಗಮಿಸಿದಾಗ ಧರಣಿಯ ಬಿಸಿ ತಟ್ಟಿತು.
ಸೋನಿಯಾ ಗಾಂಧಿ ಅವರು ಕರ್ನಾಟಕಕ್ಕೆ ಮಹದಾಯಿಯವರಹನಿ ನೀರನ್ನು ಕೊಡುವುದಿಲ್ಲ ಅಂತ ಹೇಳಿಕೆ ನೀಡಿದ್ದರು. ಕಾರಣ ಈ ಬಗ್ಗೆ ರಾಹುಲ್ ಗಾಂಧಿ ಅವರು ತಮ್ಮ ನಿಲುವು ಏನೆಂಬುದನ್ನು ತಿಳಿಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು.