ಮಾ.3 ಮತ್ತು 4 ರಂದು ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್

????????????????????????????????????

ಬೆಂಗಳೂರು, ಫೆ.26-ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಚನ್ನಭೆರೇಗೌಡ ಅವರ ಸ್ಮರಣಾರ್ಥ 37ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನ್ನು ಮಾ.3 ಮತ್ತು 4 ರಂದು ಹೊಸಕೋಟೆಯ ಶ್ರೀ ಚನ್ನಭೆರೇಗೌಡ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಧಾನಕಾರ್ಯದರ್ಶಿ ಎಸ್.ಜಯರಾಮಯ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು 400 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. 35 ರಿಂದ 85 ವರ್ಷ ವಯಸ್ಸಿನ ಮಹಿಳೆ ಮತ್ತು ಪುರುಷರು ಪಾಲ್ಗೊಳ್ಳಲಿದ್ದಾರೆ ಎಂದರು.
ಇಲ್ಲಿ ಭಾಗವಹಿಸುವ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಮಂಗಳೂರಿನಲ್ಲಿ ಏ.11 ರಿಂದ 15ರವರೆಗೆ ನಡೆಯಲಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆ ಗೌರವಾಧ್ಯಕ್ಷ ಆರ್.ಎನ್.ನರಸಿಂಹಯ್ಯ ಹಿರಿಯ ಕ್ರೀಡಾಪಟು ಎಸ್.ಶ್ಯಾಮಣ್ಣ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ