ನಗರದ 27 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಬಳಕೆಯ ವಿವರ ಬಿಡುಗಡೆ

ನಗರದ 27 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಬಳಕೆಯ ವಿವರ ಬಿಡುಗಡೆ
ಬೆಂಗಳೂರು, ಫೆ.27-ಕರ್ನಾಟಕ ಸರ್ಕಾರದ ಬೋಧನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಮಾರ್ಗ ಸೂಚಿಯಂತೆ ನಗರದ 27 ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ಬಳಕೆಯ ವಿವರವನ್ನು ಇಂದು ಬಿ.ಪ್ಯಾಕ್ ಸಂಸ್ಥೆಯು ಬಿಡುಗಡೆ ಮಾಡಿತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಸಿಇಒ ರೇವತಿ ಅಶೋಕ್, ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ವಿವರಗಳ ಮಾಹಿತಿಯನ್ನು eಠಿಠಿm://h್ಝ್ಝZ.oಜಿhZ್ಟ.್ಞಜ್ಚಿ.ಜ್ಞಿ ಈ ವೆಬ್‍ಸೈಟ್‍ನಲ್ಲಿ ಲಭ್ಯವಾಗುವಂತೆ ಪುನರುಚ್ಚಿಸಲಾಗಿದೆ ಎಂದು ತಿಳಿಸಿದರು.
ಶಾಸಕರ ಅನುದಾನದ ಬಳಕೆಯ ವಿವರಗಳನ್ನು ಮತದಾರರಿಗೆ ಒದಗಿಸುವ ಮೂಲಕ ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಹಮ್ಮಿಕೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕ್ಷೇತ್ರದ ಪ್ರಜೆಗಳ ಮಾಹಿತಿ ಪಡೆಯಬಹುದಾಗಿದೆ ಎಂದರು.
2013-14ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಹಣಕಾಸು ವರ್ಷಗಳಲ್ಲಿ ಶಾಸಕರು ತಮ್ಮ ವಿಧಾನಸಭಾಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಳಕೆ ಮಾಡಿರುವ ವಿವರಗಳು ಈ ವೆಬ್‍ಸೈಟ್‍ನಲ್ಲಿ ಸಿಗಲಿದೆ ಎಂದು ತಿಳಿಸಿದರು.
ಶಿಕ್ಷಣ, ಮೂಲಭೂತ ಸೌಕರ್ಯ ಅಭಿವೃದ್ಧಿ, ಯುವಜನ, ಕ್ರೀಡೆ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ವಿವಿಧಗಳಿಗೆ ನೀಡಿರುವ ಅನುದಾನ ಹಾಗೂ ಖರ್ಚಾಗಿರುವ ಅನುದಾನದ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ