ಹಸಿರು ಶಾಲಿನ ಮೇಲೆ ಬಿದ್ದಿರುವ ರೈತರ ರಕ್ತದ ಕಲೆಗಳು ಇನ್ನೂ ಮಾಸಿಲ್ಲ. ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರೆಶ್ನೆ?

ರೈತರ ಮೇಲೆ ಗೋಲಿಬಾರ ನqಸಿರುವ ಬಿಎಸ ಯಡಿಯೂರಪ್ಪ ರೈತ ಬಂಧು ಬಿರುದು ಹೇಗೆ ಪಡೆಯುತ್ತಿದ್ದಾರೆ : ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು, ಫೆ.27-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹಸಿರು ಶಾಲಿನ ಮೇಲೆ ಬಿದ್ದಿರುವ ರೈತರ ರಕ್ತದ ಕಲೆಗಳು ಇನ್ನೂ ಮಾಸಿಲ್ಲ. ಇಂಥದ್ದರಲ್ಲಿ ಯಾವ ಮುಖವಿಟ್ಟುಕೊಂಡು ರೈತ ಬಂಧು ಬಿರುದು ಪಡೆಯುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರೆಶ್ನೆ ಮಾಧಿದ್ದಾರೆ.

ಕಾವೇರಿ ಮಹದಾಯಿ ವಿವಾದ, ಬರ ಪರಿಸ್ಥಿತಿ, ರೈತರ ಸಾಲ ಮನ್ನಾ ವಿಷಯದಲ್ಲಿ ಚಕಾರವೆತ್ತದ ಪ್ರಧಾನಿ ರೈತ ಸಮಾವೇಶದಲ್ಲಿ ಯಾವ ಮುಖವಿಟ್ಟುಕೊಂಡು ಪಾಲ್ಗೊಳ್ಳುತ್ತಾರೆ ಎಂದು ಟೀಕಿಸಿದರು.

ವಿಧಾನಸೌಧದ ಮುಂಭಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ರೈತರ ಹೆಸರಿನಲ್ಲಿ ಹಸಿರು ಶಾಲು ಹೊದ್ದು ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನದಲ್ಲಿ ಹಾವೇರಿಯಲ್ಲಿ ಗೊಬ್ಬರ ಕೇಳಲು ಬಂದ ರೈತರ ಮೇಲೆ ಗುಂಡಿನ ದಾಳಿ ನಡೆಯಿತು. ರೈತರು ಮೃತಪಟ್ಟರು. ಯಡಿಯೂರಪ್ಪನವರ ಹಸಿರು ಶಾಲಿನ ಮೇಲೆ ಇರುವ ಆ ರಕ್ತದ ಕಲೆಗಳು ಇನ್ನೂ ಹೋಗಿಲ್ಲ. ಅಂಥದ್ದರಲ್ಲಿ ಯಾವ ಮುಖವಿಟ್ಟುಕೊಂಡು ಬಿರುದು ಪಡೆಯುತ್ತಾರೆ ಎಂದು ಟೀಕಿಸಿದರು.
ಇಂದು ದಾವಣಗೆರೆಯಲ್ಲಿ ರೈತ ಸಮಾವೇಶ ಮಾಡುತ್ತಿದ್ದಾರೆ. ಸಹಕಾರ ಸಂಘಗಳಲ್ಲಿ ರೈತರು ಮಾಡಿದ ಸಾಲವನ್ನು ರಾಜ್ಯಸರ್ಕಾರ ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳ 42 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಸಂಬಂಧ ಪ್ರಧಾನಿ ತುಟಿ ಬಿಚ್ಚುತ್ತಿಲ್ಲ ಎಂದು ದೂರಿದರು.
ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಮುಂದೆ ನಿಂತು ಕೇಳುವ ಶಕ್ತಿ ಇಲ್ಲ. ಅವರೆಲ್ಲ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಇಂಥದ್ದರಲ್ಲಿ ಯಾವ ಪುರುಷಾರ್ಥಕ್ಕೆ ಬಿರುದು ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಹದಾಯಿ ವಿಚಾರದಲ್ಲಿ ನ್ಯಾಯಾಧೀಕರಣ, ಹೊರಗೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವಂತೆ ಹೇಳಿದ್ದರೂ ಪ್ರಧಾನಿ ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಮಹದಾಯಿ ನ್ಯಾಯಾಧೀಕರಣವನ್ನು ರಚಿಸಿದ್ದೇ ಯುಪಿಎ ಸರ್ಕಾರ ಎಂದರು.
ಗೋವಾ ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು, ಮುಖ್ಯಮಂತ್ರಿಗಳು ರಾಜ್ಯದ ಪ್ರತಿನಿಧಿಯಾಗಿರುವುದರಿಂದ ಗೋವಾ ಕಾಂಗ್ರೆಸ್ಸಿಗರನ್ನು ಕೇಳುವ ಅಗತ್ಯವಿಲ್ಲ ಎಂದರು.
ರಾಜ್ಯದ ಬಗ್ಗೆ ಹಗುರವಾಗಿ ಮಾತನಾಡಿದ ಗೋವಾ ನೀರಾವರಿ ಸಚಿವರ ಹೇಳಿಕೆಯನ್ನು ಬಿಜೆಪಿ ನಾಯಕರು ಖಂಡಿಸಲಿಲ್ಲ. ಈಗ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಟೀಕಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ