ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ

Fire Fierce Hot Flames Burning Orange Heat

ಚಳ್ಳಕೆರೆ, ಫೆ.28- ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ದವಸ-ಧಾನ್ಯ ಸೇರಿದಂತೆ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಇಂದು ಬೆಳಗ್ಗೆ ಬಸ್ ನಿಲ್ದಾಣದ ಬಳಿ ಇರುವ ಹೊಟೇಲ್‍ಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು , ನೋಡು ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದಲ್ಲಿದ್ದ ಟೈರ್ ಅಂಗಡಿ ಹಾಗೂ ಬೀಡಾ ಸ್ಟಾಲ್‍ಗೂ ವ್ಯಾಪಿಸಿದ್ದು , ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ.
ಸಮೀಪದಲ್ಲೇ ಪೆಟ್ರೋಲ್ ಬಂಕ್ ಹೊಂದಿದ್ದು , ಬೆಂಕಿಯ ಕಿಡಿ ಪೆಟ್ರೋಲ್ ಬಂಕ್‍ಗೆ ಹಾರಿದ್ದರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುವಂತಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ