ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ

ತುಮಕೂರು, ಫೆ.28- ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಉಮೇಶ್ (22), ಸುಧಾಕರ್ (23), ಮೋಹನ್ (29) ಮತ್ತು ಹರೀಶ್ (27) ಬಂಧಿತ ದರೋಡೆಕೋರರು.

ಈ ನಾಲ್ವರು ನಗರದ ಹೊರವಲಯದಲ್ಲಿ ಸುತ್ತಾಡುತ್ತ ಒಂಟಿ ಮನೆಗೆ ನುಗ್ಗಿ ದರೋಡೆ ನಡೆಸುತ್ತಿದ್ದರು.

ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ದರೋಡೆಕೋರರ ಪತ್ತೆಗೆ ಜಿಲ್ಲಾ ಎಸ್‍ಪಿ ಡಾ.ದಿವ್ಯಾ ಗೋಪಿನಾಥ್, ತಿಲಕ್‍ಪಾರ್ಕ್ ವೃತ್ತ ನಿರೀಕ್ಷಕ ಹಾಗೂ ಡಿವೈಎಸ್‍ಪಿ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಈ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಪೈಕಿ ಉಮೇಶ್ ಮತ್ತು ಸುಧಾಕರ್ ವಿರುದ್ಧ ಎರಡು ಕೊಲೆ ಪ್ರಕರಣ, ಡಕಾಯಿತಿಗೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.
ಮತ್ತೊಬ್ಬ ಆರೋಪಿ ಮೋಹನ್ ವಿರುದ್ಧ ಕೊಲೆ ಹಾಗೂ ಒಂದು ಡಕಾಯಿತಿ ಯತ್ನ ಪ್ರಕರಣವಿದೆ. ಆರೋಪಿಗಳೆಲ್ಲರೂ ಬೆಂಗಳೂರಿನಲ್ಲಿ ಬಾರ್ ಅಂಡ್ ರೆಸ್ಟೋರೆಂಟ್‍ನಲ್ಲಿ ಸಪ್ಲೆಯರ್ ಕೆಲಸ ಹಾಗೂ ಆಟೋ ಚಾಲಕ ವೃತ್ತಿ ಮಾಡಿಕೊಂಡಿದ್ದು, ಇವರೆಲ್ಲರೂ ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿಯ ಕುಪ್ಪೆ ಗ್ರಾಮದವರು.

ಆರೋಪಿಗಳಿಂದ ಬಜಾಜ್ ಪಲ್ಸರ್ ಬೈಕ್ ಹಾಗೂ ಚಾಕುವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ