ಕ್ಷುಲ್ಲಕ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ

ಕೊಳ್ಳೆಗಾಲ,ಫೆ.28-ಗುಂಪು ಘರ್ಷಣೆ ವೇಳೆ ಸ್ಥಳಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ 9 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಪೈಕಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ಗಿರೀಶ್, ದಿಲೀಪ್, ಮಹೇಶ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆ ಮಧ್ಯಾಹ್ನ ತಾಲ್ಲೂಕಿನ ಹಳೇ ಅನ್ನಗಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಈ ವೇಳೆ ಗ್ರಾಮಸ್ಥರೊಬ್ಬರು ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಮೇರೆಗೆ ಸಿಬ್ಬಂದಿಗಳಾದ ಪರುಶುರಾಮ್, ಸಿದ್ದಪ್ಪ ಸ್ಥಳಕ್ಕೆ ಭೇಟಿ ನೀಡಿ ಗಲಾಟೆ ನಿಯಂತ್ರಿಸಲು ಮುಂದಾಗಿದ್ದಾರೆ. ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು , ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ದ ಪ್ರಕರಣ ದಾಖಲಾಗಿದೆ.
ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ