ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍

ಪಾವಗಡ, ಫೆ.28- ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍ಅನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ.

ಮಾ.1ರಂದು ತಿರುಮಣಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ ಉದ್ಘಾಟನೆಗೊಳ್ಳಲಿದ್ದು, ಕೇಂದ್ರ ವಿದ್ಯುತ್ ಖಾತೆ ರಾಜ್ಯ ಸಚಿವ ರಾಜ್‍ಕುಮಾರ್ ಸಿಂಗ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ರೋಣ ಶಾಸಕ ಹಾಗೂ ಕೆಆರ್‍ಇಡಿಎಲ್ ಅಧ್ಯಕ್ಷ ಜಿ.ಎಸ್.ಪಾಟೀಲ್ ಪಾಲ್ಗೊಳ್ಳಲಿದ್ದು, ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ತಿಮ್ಮರಾಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಲೋಕಸಭಾ ಸದಸ್ಯರಾದ ಮುದ್ದಹನುಮೇಗೌಡ, ಚಂದ್ರಪ್ಪ, ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೆಎಸ್‍ಪಿ ಅಧ್ಯಕ್ಷ ಪಿ.ಯು.ಬಲರಾಮ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ