ವಿಶೇಷ ಆಹ್ವಾನಿತನಾಗಿ ಲೋಕಪಾಲ ಸಭೆಗೆ ಬರುವುದಿಲ್ಲ: ಪ್ರಧಾನಿಗೆ ಖರ್ಗೆ ಪತ್ರ

ನವದೆಹಲಿ: ಲೋಕಪಾಲ ಆಯ್ಕೆ ಸಮಿತಿ ಸಭೆಗೆ ಹಾಜರಾಗುವಂತೆ ನೀಡಲಾಗಿದ್ದ ಆಹ್ವಾನವನ್ನು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಿರಸ್ಕರಿಸಿದ್ದಾರೆ.

ಲೋಕಪಾಲ ಆಯ್ಕೆ ಸಮಿತಿ ಸಭೆಗೆ ವಿಶೇಷ ಆಹ್ವಾನಿತರಾಗಿ ಬರುವಂತೆ ಪ್ರಧಾನಿ ಮೋದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿದ್ದರು. ಆದರೆ  ಪ್ರಸ್ತುತ ಮಲ್ಲಿಕಾರ್ಜುನ ಖರ್ಗೆ ಸಭೆಗೆ ಹಾಜರಾಗದೇ ಇರಲು ತೀರ್ಮಾನಿಸಿದ್ದಾರೆ.

ಆದರೆ ಸಭೆಯಲ್ಲಿ ತಮಗೆ ವಿಶೇಷ ಆಹ್ವಾನಿತನ ಸ್ಥಾನ ನೀಡಲಾಗಿದೆಯಷ್ಟೆ. ಡಮ್ಮಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಅದನ್ನು ವಿರೋಧಿಸುವ ಅಧಿಕಾರ ತಮಗೆ ಇರುವುದಿಲ್ಲ. ಹೀಗಾಗಿ ಸಭೆಯಲ್ಲಿ ಭಾಗವಹಿಸದೇ ಇರಲು ಖರ್ಗೆ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಭ್ರಷ್ಟಾಚಾರ ನಿಗ್ರಹಕ್ಕೆ ಲೋಕಪಾಲ ನೇಮಕ ಆಯ್ಕೆ ನಿರ್ಣಾಯಕವಾಗಿದ್ದು, ಇಂತಹ ಮಹತ್ವದ ಹುದ್ದೆಗೆ ಅರ್ಹರನ್ನು ನೇಮಕ ಮಾಡುವಾಗ ಪ್ರತಿಪಕ್ಷಗಳನ್ನು ಗಣನೆಗೆ ತೆಗೆದುಕೊಳ್ಳುವುದ ಅನಿವಾರ್ಯ. ಆದರೆ ಮೋದಿ ಸರ್ಕಾರ ನಾಮ್ ಕೆ ವಾಸ್ತೆ ಎಂಬಂತೆ ಖರ್ಗೆ ಅವರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಿದೆ. ಆ ಮೂಲಕ ಪ್ರತಿಪಕ್ಷಗಳಿಲ್ಲದೇ ಲೋಕಪಾಲ ಆಯ್ಕೆ ಮಾಡುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇನ್ನು ಸಭೆಯಲ್ಲಿ ಮೋದಿ ಜತೆಗೆ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪಾಲ್ಗೊಳ್ಳಲ್ಲಿದ್ದಾರೆ

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ