ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಅಧಿಕೃತ ಆದೇಶಕ್ಕೆ ಮುಖ್ಯಮಂತ್ರಿಯವರು ಅಂಕಿತ ಹಾಕಿದ್ದಾರೆ. ಆದೇಶ ನಾಳೆ ಹೊರಬೀಳಲಿದೆ. ಆರನೇ ವೇತನ ಆಯೋಗದ ಶಿಫಾರಸು ಅನ್ವಯ ನೌಕರರ ವೇತನ ಶೇ.30ರಷ್ಟು ಹೆಚ್ವಳವಾಗಲಿದೆ. ಶನಿವಾರ ನಡೆಯಲಿರುವ ಸಂಪುಟ ಸಭೆಯಲ್ಲಿ ಇದಕ್ಕೆ ಘನೋತ್ತರ ಮಂಜೂರಾತಿ ಸಿಗಲಿದೆ.