ನವದೆಹಲಿ:ಮಾ-1:ಐಎನ್ಎಕ್ಸ್ ಮೀಡಿಯಾ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕಾರ್ತಿ ಚಿದಂಬರಂ ಅವರನ್ನು ಐದು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.
ದೆಹಲಿಯ ಪಟಿಯಾಲ ಹೌಸ್ನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಸುನೀಲ್ ರಾಣಾ ಕಾರ್ತಿ ಚಿದಂಬರಂ ಗೆ 5 ದಿನಗಳಕಾಲ ಸಿಬಿಐ ಕಸ್ಟಡಿ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದ್ದ ಸಿಬಿಐ ಇಂದು ದೆಹಲಿ ಪಟಿಯಾಲ ಕೋರ್ಟ್ ಮುಂದೆ ಹಾಜರುಪಡಿಸಿದ್ದು ಈ ವೇಳೆ ಸಿಬಿಐ ಹೆಚ್ಚುವರಿ ವಿಚಾರಣೆಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿತು. ಅಲ್ಲದೇ ಕಾರ್ತಿ ಚಿದಂಬರಂ ವಿಚಾರಣೆಗೆ ಸಹಕರಿಸುತ್ತಿಲ್ಲ. ಇದರಿಂದ ತನಿಖೆಗೆ ಹಿನ್ನಡೆಯುಂಟಾಗುತ್ತಿದೆ ಎಂದು ಸಿಬಿಐ ಕೋರ್ಟ್ ಗೆ ತಿಳಿಸಿದ್ದು 15 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿತ್ತು. ಇದಕ್ಕೆ ವಿಶೇಷ ನ್ಯಾಯಾಲಯ 15 ದಿನಗಲ ಬದಲಾಗಿ 5 ದಿನಗಳ ಕಾಲ ಅಂದರೆ ಮಾ.6ರವರೆಗೆ ಸಿಬಿಐ ವಶಕ್ಕೆ ನೀಡಿ ಆದೇಶ ನೀಡಿದೆ.
INX Media Money Laundering Case,Karti Chidambaram,CBI Custody