ಬೆಳಗಾವಿ:ಮಾ-1: ಬೆಳಗಾವಿ ಆಟೊ ನಗರದಲ್ಲಿರುವ ಅನಧಿಕೃತ ಕಸಾಯಿಖಾನೆಗೆ ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಸ್ಥಳೀಯ ರಾಜಕಾರಣಿಗಳ ಬೆಂಬಲದಿಂದಾಗಿ ಇಲ್ಲಿ ಅನಧಿಕೃತ ಕಸಾಯಿಖಾನೆ ತೆರೆಯಲಾಗಿದ್ದು, ಇದನ್ನು ತಡೆಯುವಲ್ಲಿ ಸ್ಥಳೀಯ ಪೊಲೀಸರು ವಿಫಲರಾಗಿದ್ದಾರೆ. ಅಂತವರ ವಿರುದ್ಧ ತನಿಖೆಗೆ ಸೂಚಿಸಲಾಗುವುದು ಎಂದು ಮನೇಕಾ ಗಾಂಧಿ ತಿಳಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್, ಸಂಸದರಾದ ಪ್ರಹ್ಲಾದ ಜೋಶಿ, ಸುರೇಶ ಅಂಗಡಿ, ಶಾಸಕರಾದ ಸಂಜಯ ಪಾಟೀಲ, ಡಾ.ವಿಶ್ವನಾಥ ಪಾಟೀಲ ಈ ವೇಳೆ ಹಾಜರಿದ್ದರು.