ಜಮ್ಮು, ಮಾ.1-ಕಾಶ್ಮೀರ ಗಡಿಯೊಳಗೆ ನುಸುಳಲು 400ಕ್ಕೂ ಹೆಚ್ಚು ಪಾಕಿಸ್ತಾನಿ ಭಯೋತ್ಪಾದಕರು ಸಜ್ಜಾಗಿದ್ದಾರೆ ಎಂಬ ಗುಪ್ತಚರ ವರದಿಗಳ ಬೆನ್ನಲ್ಲೇ ಉಗ್ರಗಾಮಿಯೊಬ್ಬ ಯೋಧರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತನಾಗಿದ್ದಾನೆ. ಮತ್ತಷ್ಟು ಉಗ್ರರನ್ನು ಬೇಟೆಯಾಡಲು ಯೋಧರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೆÇೀರಾದ ಹಜಿನ್ ಪ್ರದೇಶಕ್ಕೆ ಭಯೋತ್ಪಾದಕರು ನುಸುಳಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ಮಧ್ಯರಾತ್ರಿಯಿಂದಲೇ ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದವು. ಈ ಸಂದರ್ಭದಲ್ಲಿ ಇಂದು ಮುಂಜಾನೆ ಉಗ್ರರು ಯೋಧರ ಮೇಲೆ ಗುಂಡು ಹಾರಿಸಿದಾಗ ಭಾರೀ ಗುಂಡಿನ ಕಾಳಗ ನಡೆಯಿತು.
ಶಕ್ರುದ್ದೀನ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ತಾನಿ ಉಗ್ರಗಾಮಿಯೊಬ್ಬ ಹತನಾಗಿದ್ದು, ಆತನಿಂದ ಶಸ್ತ್ರಾ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆ ಇದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.