ಬೆಂಗಳೂರು, ಮಾ.1- ಬಿಜೆಪಿಯವರು ನಾಳೆಯಿಂದ ಹಮ್ಮಿಕೊಂಡಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಯು.ಬಿ.ಸಿಟಿಯಿಂದ ಪ್ರಾರಂಭವಾಗಿ ಶಾಂತಿನಗರ ವಿಧಾನಸಭಾ ಕ್ಷೇತ್ರದವರೆಗೆ ನಡೆಯಲಿದೆ.
ಬಿಜೆಪಿಯವರು ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ಶಾಂತಿನಗರ ತಲುಪಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ಕುಮಾರ್, ಡಿ.ವಿ.ಸದಾನಂದಗೌಡ, ರಾಜ್ಯ ಉಸ್ತುವಾರಿ ಮುರಳಿಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಸೇರಿದಂತೆ ಇತರೆ ನಾಯಕರು, ಬಿಬಿಎಂಪಿ ಸದಸ್ಯರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಉದ್ಯಮಿ ಪುತ್ರ ವಿದ್ವತ್ ಮೇಲೆ ನಡೆಸಿದ ದೌರ್ಜನ್ಯ ಹಿನ್ನೆಲೆಯಲ್ಲಿ ಶಾಂತಿನಗರದಿಂದಲೇ ಬಿಜೆಪಿ ಪಾದಯಾತ್ರೆ ಪ್ರಾರಂಭವಾಗಲಿದೆ.