ಮಹತ್ವದ ಮಸೂದೆಗೆ ಅಸ್ತು:  ಆರ್ಥಿಕ ಅಪರಾಧಿಗಳ ಅಂಕುಶಕ್ಕೆ ಅಸ್ತ್ರ

ನವದೆಹಲಿ: ಸುಸ್ತಿದಾರ ಆಸ್ತಿ ಜಪ್ತಿ ಮಾಡುವುದಕ್ಕೆ ಅನುವು ಮಾಡಿಕೊಡುವ ದೇಶ ತೊರೆದ ಅಥವಾ ಪರಾರಿಯಾದ ಆರ್ಥಿಕ ಅಪರಾಧಿಗಳ ಮಸೂದೆ- 2018ಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 12 ಸಾವಿರ ಕೋಟಿ ವಂಚನೆ ಮಾಡಿರುವ ಪ್ರಕರಣದಲ್ಲಿ ನೀರವ್ ಮೋದಿಯನ್ನು ವಾಪಸ್ ಕರೆತರಲು ಕಷ್ಟಸಾಧ್ಯವಾಗಿರುವಾಗಲೇ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ಇಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮಸೂದೆ ಸಹಕಾರಿಯಾಗಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವ ಅರುಣ್ ಜೆಟ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಆರ್ಥಿಕ ಅಪರಾಧಿಗಳ ಬೇನಾಮಿ ಸೇರಿದಂತೆ ಎಲ್ಲಾ ಆಸ್ತಿಗಳನ್ನು ವಶಪಡಿಸಿಕೊಳ್ಳುವುದಕ್ಕೆ ಈ ಮಸೂದೆ ಸಹಕಾರಿಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ದೇಶದಲ್ಲಷ್ಟೇ ಅಲ್ಲದೇ ವಿದೇಶಗಳಲ್ಲಿರುವ ಆಸ್ತಿಯನ್ನೂ ವಶಪಡಿಸಿಕೊಳ್ಳಲು ಈ ಮಸೂದೆ ಅನುವು ಮಾಡಿಕೊಡಲಿದೆ.  ಆದರೆ ಇದಕ್ಕೂ ಮುನ್ನ ಆಯಾ ದೇಶಗಳೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಳ್ಳಬೇಕೆಂದು ಜೇಟ್ಲಿ ತಿಳಿಸಿದ್ದಾರೆ. ಮಸೂದೆಯನ್ನು ಸಂಸತ್ ನ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ