ಬೆಂಗಳೂರು,ಮಾ.2-ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡವ ವರದಿ ಕುರಿತಂತೆ ಮಾ.11ರಂದು ತುಮಕೂರಿನಲ್ಲಿ ಬೃಹತ್ ಜಾಗೃತಿ ಅಭಿಯಾನ ನಡೆಸಲು ಮಾದಿಗರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎ.ಕೇಶವಮೂರ್ತಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟವು ಫೆ.22ರಿಂದಲೂ ಫ್ರೀಡಂಪಾರ್ಕ್ನಲ್ಲಿ ಅನಿರ್ಧಿಷ್ಟ ಉಪವಾಸ ಆರಂಭಿಸಲಾಗಿದೆ. ಆದರೆ ರಾಜ್ಯ ಸರ್ಕಾರ ವರದಿ ಶಿಫಾರಸ್ಸನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅನಗತ್ಯ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.
ಬೆಳಗಾವಿ ಅಧಿವೇಶನದಲ್ಲಿಯೂ ಸಹ ಸದಾಶಿವ ಆಯೋಗದ ವರದಿಯನ್ನುಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಸರ್ಕಾರ ತಿಳಿಸಿತ್ತು. ಸದಾಶಿವ ಆಯೊಗ ವರದಿ ಜಾರಿಗಾಗಿ ಕಪ್ಪು ಪಟ್ಟಿ ಧರಿಸಿ ಹೋರಾಟ ನಡೆಸಿದ್ದು, ಒಕ್ಕೂಟ ಕಾರ್ಯಕರ್ತರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ಸದಾಶಿವ ಆಯೋಗದ ವರದಿಯಲ್ಲಿನ ಮೂಲ ಅಂಶಗಳನ್ನು ಯಥಾವತ್ತಾಗಿ ಸಂಸತ್ಗೆ ಶಿಫಾರಸ್ಸು ಮಾಡಬೇಕು. ಸಾಮಾಜಿಕ, ಆರ್ಥಿಕ, ಜಾತಿಗಣತಿ, ವರದಿಯನ್ನೂ ಈ ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು. ಎಲ್ಲ ರಾಜಕೀಯ ಪಕ್ಷಗಳು ಮಾದಿಗ ಸಮುದಾಯಕ್ಕೆ 15 ಎಂಎಲ್ಎ ಟಿಕೆಟ್ ನೀಡಬೇಕೆಂದರು.