ವಾಷಿಂಗ್ಟನ್:ಮಾ-2: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂದು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
ಭಾರತದಲ್ಲಿ ನೀರವ್ ಮೋದಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈಗಾಗಲೇ ನೀರವ್ ಮೋದಿ ಸಂಸ್ಥೆಗೆ ಸಂಬಂಧಿಸಿದ ಸುಮಾರು 10 ಮಂದಿ ಉನ್ನತಾಧಿಕಾರಿಗಳಿಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ನೀರವ್ ಮೋದಿ ವಶಕ್ಕೆ ಪಡೆಯಲು ಇಂಟರ್ ಪೋಲ್ ನೆರವು ಕೂಡ ಕೋರಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧಿಕಾರಿಗಳು, ನೀರವ್ ಮೋದಿ ಅಮೆರಿಕಾದಲ್ಲೇ ಇದ್ದಾನೆ ಎಂಬುದನ್ನು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಗಾಗಲೇ ಪ್ರಕರಣದ ಮತ್ತೋರ್ವ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಸುಮಾರು 41 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳ ಸೇರಿದಂತೆ ಒಟ್ಟು 8 ರಾಜ್ಯಗಳ ಸುಮಾರು 1200 ಕೋಟಿ ರೂಗೂ ಅಧಿಕ ಆಸ್ತಿಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
“Can’t Confirm, Nirav Modi,US