ಈಶಾನ್ಯ ಪ್ರಾಂತ್ಯದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ನಡೆದ ಮಹತ್ವದ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ

ಅಗರ್ತಲಾ/ಕೊಹಿಮಾ/ಶಿಲ್ಲಾಂಗ್, ಮಾ.2-ಈಶಾನ್ಯ ಪ್ರಾಂತ್ಯದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ನಡೆದ ಮಹತ್ವದ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
ಈ ಮೂರು ರಾಜ್ಯಗಳಲ್ಲಿ ನಾಳೆ ಬೆಳಗ್ಗೆ 8 ಗಂಟೆಯಿಂದ ಭಾರೀ ಬಂದೋಬಸ್ತ್ ನಡುವೆ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಲಭಿಸುವ ನಿರೀಕ್ಷೆ ಇದೆ. ಈ ಮೂರು ರಾಜ್ಯಗಳು ತಲಾ 60 ಸದಸ್ಯ ಬಲ ಹೊಂದಿವೆ.
ತ್ರಿರಾಜ್ಯಗಳಲ್ಲೂ ಬಿಜೆಪಿ ಜಯ ಸಾಧಿಸಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇನ್ನೆರಡು ಸಮೀಕ್ಷೆಗಳ ಪ್ರಕಾರ ಬಿಜೆಪಿ ತ್ರಿಪುರದಲ್ಲಿ 25 ವರ್ಷಗಳ ಎಡ ರಂಗದ ಸರ್ಕಾರವನ್ನು ಪದಚ್ಯುತಿಗೊಳಿಸಲಿದ್ದು, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಕೇಸರಿ ಪಕ್ಷ ಸರ್ಕಾರ ರಚಿಸುತ್ತದೆ ಎಂದು ತಿಳಿಸಿವೆ.
ಮೇಘಾಲಯದಲ್ಲಿ ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಅಡಳಿತದಲ್ಲಿದ್ದರೆ, ನಾಗಾಲ್ಯಾಂಡ್‍ನಲಲಿ 2003ರಿಂದ ನಾಗಾ ಪೀಪಲ್ಸ್ ಫ್ರಂಟ್(ಎನ್‍ಎಫ್‍ಪಿ) ಅಧಿಕಾರದಲ್ಲಿದೆ.
ಈಗಾಗಲೇ ಈಶಾನ್ಯ ಭಾರತದ ಅಸ್ಸಾಂ, ಮಣಿಪುರ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳಲ್ಲಿ ಸರ್ಕಾರ ರಚಿಸಿರುವ ಬಿಜೆಪಿ ತನ್ನ ಪ್ರಾಬಲ್ಯವನ್ನು ವಿಸ್ತರಿಸುವ ತವಕದಲ್ಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ