ಐದು ದಿನಗಳ ಕಾಲ ನಡೆಯುವ ರಂಗ ಪಂಚಮಿ ಪ್ರಯುಕ್ತ ವಿಶೇಷವಾಗಿ ಉತ್ತರ ಭಾರತದಲ್ಲಿ ಸಡಗರ-ಸಂಭ್ರಮ..

ನವದೆಹಲಿ, ಮಾ.2-ದೇಶದ್ಯಾಂತ ಬಣ್ಣಗಳ ಹಬ್ಬ ಹೋಳಿಯನ್ನು ಆಚರಿಸಲಾಗುತ್ತಿದೆ. ಐದು ದಿನಗಳ ಕಾಲ ನಡೆಯುವ ರಂಗ ಪಂಚಮಿ ಪ್ರಯುಕ್ತ ವಿಶೇಷವಾಗಿ ಉತ್ತರ ಭಾರತದಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಬಣ್ಣಗಳ ಓಕುಳಿಯಲ್ಲಿ ಜನರು ಮಿಂದೇಳುತ್ತಾ ಪರಸ್ಪರ ಹೋಳಿ ಶುಭಾಶಯ ಕೋರುತ್ತಿದ್ದಾರೆ.
ಹೋಳಿಕಾ ದಹನ್(ಕಾಮನ ದಹನ) ದಿನವಾದ ಇಂದು ಬೃಹತ್ ಸಂಖ್ಯೆಯಲ್ಲಿ ಜನರು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹೋಳಿ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳೂ ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಹೋಳಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ದೇಶದ ಜನರಿಗೆ ಶುಭ ಕೋರಿದ್ಧಾರೆ.
ಬಣ್ಣಗಳ ಹಬ್ಬವಾದ ಹೋಳಿ ನಮ್ಮ ಸಮಾಜದಲ್ಲಿ ಸೌಹಾರ್ದತೆಯ ಆಚರಣೆಯಾಗಲಿ ಪ್ರತಿಯೊಬ್ಬರ ಬದುಕಿನಲ್ಲಿ ಶಾಂತಿ, ಸಂತಸ ಮತ್ತು ಸಮೃದ್ಧಿ ತರಲಿ ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ