![puttanna-chetty-town-hall](http://kannada.vartamitra.com/wp-content/uploads/2018/03/puttanna-chetty-town-hall-629x381.jpg)
ಬೆಂಗಳೂರು,ಮಾ.2-ಕನ್ನಡ ಅಭಿವೃದ್ದಿ ಪ್ರಾಧಿಕಾರ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಾ.4ರಂದು ಸಂಜೆ 5.30ಕ್ಕೆ ಇಂದಿರಾನಗರ ಮೆಟ್ರೋ ರೈಲ್ವೆ ನಿಲ್ದಾಣದ ಭಾರತಿ ವೃಂದದಲ್ಲಿ ಬೆಂಗಳೂರು ನಗರ ಪುರಭವನ ನಿರ್ಮಾಪಕ ಹಾಗೂ ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್.ಕೆ.ಪಿ.ಪುಟ್ಟಣ್ಣ ಶೆಟ್ಟಿ ಅವರ ಸಂಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಅಧ್ಯಕ್ಷ ಎಂ.ತಿಮ್ಮಯ್ಯ ವಹಿಸಲಿದ್ದು , ಮುಖ್ಯ ಅತಿಥಿಗಳಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ಸದಸ್ಯ ಪ್ರಭಾಕರ ಪಟೇಲ್ ಮಿರಂಡ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ವಿ.ಎಸ್.ಹಿರೇಮಠ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀ ಮಹಾಲಕ್ಷ್ಮಿ ಗಾನಸುಧಾ ನಿಕೇತನ ಶ್ರೀಮತಿ ವೇದಾವತಿ ಪ್ರಸನ್ನ ತಂಡದವರಿಂದ ಜನಪದ ಭಾವಗೀತೆಗಳ ಗಾಯನವನ್ನು ಏರ್ಪಡಿಸಲಾಗಿದೆ ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ಸಿದ್ದಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.