ಶಾರ್ಟ್‍ಸಕ್ರ್ಯೂಟ್‍ನಿಂದ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 20 ಲಕ್ಷ ಅಗ್ನಿಗಾಹುತಿ

ಬಾಗಲಕೋಟೆ, ಮಾ.3-ಶಾರ್ಟ್‍ಸಕ್ರ್ಯೂಟ್‍ನಿಂದ ಎರಡು ಅಂಗಡಿಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 20 ಲಕ್ಷ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾಗಿರುವ ಘಟನೆ ಜಮಖಂಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಮೊಬೈಲ್ ಅಂಗಡಿ ಹಾಗೂ ಮೆಡಿಕಲ್ ಶಾಪ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಒಂದು ಅಂಗಡಿಯಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡು ಪಕ್ಕದ ಅಂಗಡಿಗೂ ವ್ಯಾಪಿಸಿದ್ದರಿಂದ ಭಾರೀ ನಷ್ಟ ಸಂಭವಿಸಿದೆ.
ಜಮಖಂಡಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ