ಬಿಬಿಎಂಪಿ ಅವ್ಯವಹಾರ ಆರೋಪ ಮಾಡುವ ಭರದಲ್ಲಿ ಬೇರೆ ರಾಜ್ಯಗಳ ಫೋಟೋ ಮುದ್ರಿಸಿ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ

ಬಿಬಿಎಂಪಿ ಅವ್ಯವಹಾರ ಆರೋಪ ಮಾಡುವ ಭರದಲ್ಲಿ ಬೇರೆ ರಾಜ್ಯಗಳ ಫೋಟೋ ಮುದ್ರಿಸಿ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ
ಬೆಂಗಳೂರು, ಮಾ.3- ಬಿಬಿಎಂಪಿಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಆರೋಪ ಮಾಡುವ ಭರದಲ್ಲಿ ಬೇರೆ ರಾಜ್ಯಗಳ ಫೋಟೋಗಳನ್ನು ಮುದ್ರಿಸಿದ ಬಿಜೆಪಿ ಸಾರ್ವಜನಿಕವಾಗಿ ಇಕ್ಕಟ್ಟಿಗೆ ಸಿಲುಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಮುಗಿ ಬಿದ್ದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತಿಲ್ಲ. ಅವರು ಸದಾ ಸುಳ್ಳು ಹೇಳುವ ನಕಲಿ ಜನಗಳು ಎಂದು ಕಿಡಿಕಾರಿದ್ದಾರೆ.
ಬಿಜೆಪಿಯವರಿಗೆ ಯಾವತೂ ಸತ್ಯ ಹೇಳಿ ಗೊತ್ತಿಲ್ಲ, ನಕಲಿ ಜನಗಳು ಎಂದು ಲೇವಡಿ ಮಾಡಿದರು.
ಬೇರೆ ಚುನಾವಣೆಗಳು ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ:
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಯಾವ್ಯಾವುದೋ ಫೆÇೀಟೋಗಳನ್ನು ಬಳಸಿಕೊಂಡು ಜನರನ್ನು ದಿಕ್ಕುತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನಾವೇನು ಇಲ್ಲಿ ಕಡ್ಲೆಪುರಿ ತಿನ್ನುತ್ತಿಲ್ಲ. ಅವರ ಯಡವಟ್ಟುಗಳನ್ನು ಜನರಿಗೆ ತಿಳಿಸುತ್ತೇವೆ. ಬಿಜೆಪಿಯವರು ಸುಳ್ಳು ಹೇಳಬೇಕೆಂದು ನಿರ್ಧಾರ ಮಾಡಿದ್ದಾರೆ. ಮೋದಿ ಅವರಿಂದ ಹಿಡಿದು ಎಲ್ಲಾ ಬಿಜೆಪಿ ನಾಯಕರು ಇದನ್ನೇ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಕೇಂದ್ರ ನಾಯಕರು ಪ್ರಚಾರಕ್ಕಾಗಿ ರಾಜ್ಯಕ್ಕೆ ಬರುತ್ತಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ನಾಯಕರ ಕೊರತೆ ಇದೆ. ಹೀಗಾಗಿ ಕೇಂದ್ರದ ನಾಯಕರು ಆಗಮಿಸುತ್ತಿದ್ದಾರೆ. ನಮ್ಮಲ್ಲಿ ನಾಯಕರ ಕೊರತೆ ಇಲ್ಲ ಎಂದರು.
ಮೂರು ರಾಜ್ಯಗಳ ಫಲಿತಾಂಶ ನಮ್ಮ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ