ಮೆಘಾಲಯದಲ್ಲಿ ಕಾಂಗ್ರೆಸ್ ಮುನ್ನಡೆ: ಅತಂತ್ರ ಸ್ಥಿತಿ ನಿರ್ಮಾಣ

ಶಿಲ್ಲಾಂಗ್:ಮಾ-3; ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಅಂತಿಮ ಘಟ್ಟ ತಲುಪಿದ್ದು, ಯಾವೊಂದೂ ಪಕ್ಷ ಪೂರ್ಣ ಬಹುಮತ ಪಡೆಯುವಲ್ಲಿ ವಿಫಲವಾಗಿರುವುದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಮೇಘಾಲಯದ ಒಟ್ಟು 59 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಎನ್ ಪಿಪಿ ಪಕ್ಷ 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಅಂತೆಯೇ ಬಿಜೆಪಿ ಪಕ್ಷ ಕೇವಲ 6 ಸ್ಥಾನಗಳಿಗೆ ಸಮಾಧಾನ ಪಟ್ಟುಕೊಂಡಿದ್ದು, ಇತರರು 17 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮೇಘಾಲಯದಲ್ಲಿ ಸರ್ಕಾರ ರಚನೆಗೆ 31 ಸ್ಥಾನಗಳ ಅವಶ್ಯಕತೆ ಇದ್ದು, ಇದೇ ಕಾರಣಕ್ಕೆ ಮೇಘಾಲಯದಲ್ಲಿ ಇದೀಗ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೆಘಾಲಯದಲ್ಲಿ ಗೋವಾ ವಿಧಾನಸಭೆಯಲ್ಲಿ ಉಂಟಾದಂತೆ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಮೆಘಾಲಯಕ್ಕೆ ದೌಡಾಯಿಸಿದ್ದು, ಪಕ್ಷದ ಹಿರಿಯ ಮುಖಂಡರು ಸ್ವತಂತ್ರ್ಯ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ