ಜಿಲ್ಲಾಸ್ಪತ್ರೆಯಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ

ತುಮಕೂರು, ಮಾ.3- ಜಿಲ್ಲಾಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾಘಟಕ (ಎನ್‍ಐಸಿಯು)ದಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಹಿನ್ನೆಲೆಯಲ್ಲಿ 29 ನವಜಾತ ಶಿಶುಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಪೆÇೀಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಮೋಹನ್‍ರಾಜ್ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಿನ್ನೆ ಸಂಜೆ ಜಿಲ್ಲಾಸ್ಪತ್ರೆಯಲ್ಲಿ ಶಾರ್ಟ್‍ಸಕ್ರ್ಯೂಟ್‍ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದಾದಿಯರು ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಒಂದು ವೇಳೆ ಅನಾಹುತ ಸಂಭವಿಸಿದ್ದರೆ ಜಿಲ್ಲೆಗೆ ಕೆಟ್ಟ ಹೆಸರು ಬರುತ್ತಿತ್ತು ಎಂದರು.
ಎನ್‍ಐಸಿಯು ಘಟಕ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾರ್ವಜನಿಕರ ನೆರವಿನೊಂದಿಗೆ 19ಶಿಶುಗಳನ್ನು ರಕ್ಷಿಸಿದ್ದು, ಘಟಕ ಎರಡರಲ್ಲಿದ್ದ 10 ಶಿಶುಗಳು ಸೇರಿ ಒಟ್ಟು 29 ಶಿಶುಗಳನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ನಗರದ ಸಿದ್ದಗಂಗಾ ಹಾಗೂ ಶ್ರೀದೇವಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ