ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಭೇದ ಮರೆತು ರಾಜ್ಯದ ಹಿತಕ್ಕಾಗಿ, ರೈತರ ರಕ್ಷಣೆಗಾಗಿ ಶ್ರಮಿಸಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪಕ್ಷಭೇದ ಮರೆತು ರಾಜ್ಯದ ಹಿತಕ್ಕಾಗಿ, ರೈತರ ರಕ್ಷಣೆಗಾಗಿ ಶ್ರಮಿಸಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರೆ

ಬೆಂಗಳೂರು, ಮಾ.3-ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾರನ್ನೂ ದೂರುವುದಿಲ್ಲ. ಆದರೆ ಎಲ್ಲರೂ ಒಗ್ಗಟ್ಟಾಗಿ ನಮ್ಮ ರಾಜ್ಯದ ಪರವಾಗಿ ಕೆಲಸ ಮಾಡಬೇಕಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದರು.
ತಮಿಳುನಾಡು ರಾಜ್ಯದಿಂದಲೂ ಒತ್ತಡವಿದೆ ಎಂದ ಅವರು, ನಾವೆಲ್ಲರೂ ಪಕ್ಷಭೇದ ಮರೆತು ನಮ್ಮ ರಾಜ್ಯದ ಹಿತಕ್ಕಾಗಿ, ರೈತರ ರಕ್ಷಣೆಗಾಗಿ ಶ್ರಮಿಸಬೇಕು ಎಂದರು.
ನಮ್ಮ ರಾಜ್ಯದಲ್ಲಿ ಕಾವೇರಿ ಸಮಸ್ಯೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮತ್ತೆ ಜೆಡಿಎಸ್‍ನ್ನು ಅಧಿಕಾರಕ್ಕೆ ತರಬೇಕಿದೆ ಎಂದರು.
ಪ್ರಾದೇಶಿಕ ಪಕ್ಷವನ್ನು ಉಳಿಸಿ, ಬೆಳೆಸಲು ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಕರೆ ನೀಡಿದರು.
ಈ ಪ್ರಾದೇಶಿಕ ಪಕ್ಷವನ್ನು ಬೆಳೆಸಲು ನನ್ನ ಈ ಇಳಿವಯಸ್ಸಿನಲ್ಲೂ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ