ಮೆಘಾಲಯದಲ್ಲಿ ಸಮಾನ ಮನಸ್ಕರರ ಜತೆ ಸೇರಿ ಎನ್ ಪಿಪಿ ಸರ್ಕಾರ ರಚನೆ: ಸಿ.ಸಂಗ್ಮಾ

ಶಿಲ್ಲಾಂಗ್:ಮಾ-3: ಮೆಘಾಲಯದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಪಡೆಯದ ಹಿನ್ನಲೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಸಮಾನ ಮನಸ್ಕರರ ಜತೆ ಸೇರಿ ನ್ಯಾಷನಲ್‌ ಪಿಪಲ್‌ ಪಾರ್ಟಿ (ಎನ್‌ಪಿಪಿ) ಸರ್ಕಾರ ರಚನೆ ಮಾಡಲಿದೆ ಎಂದು ಪಕ್ಷದ ಅಧ್ಯಕ್ಷ ಕನ್ರಾಡ್ ಸಂಗ್ಮಾ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಗ್ಮಾ, ಕಾಂಗ್ರೆಸ್ ನ ದುರಾಡಳಿತಕ್ಕೆ ಮೇಘಾಲಯದ ಜನ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿದ್ದಾರೆ. ಸಮಾನ ಮನಸ್ಕ ಪಕ್ಷಗಳ ಜೊತೆ ಸೇರಿ ಸರ್ಕಾರ ರಚಿಸುವುದಾಗಿ ಹೇಳಿದರು.

ಕಾಂಗ್ರೆಸ್ 22 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ನಿಚ್ಚಳ ಬಹುಮತ ಪಡೆಯುವುದು ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರ ಇಡುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಸಂಗ್ಮಾ ಹೇಳಿದ್ದಾರೆ.

60 ವಿಧಾನಸಭಾ ಕ್ಷೇತ್ರಗಳ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆದಿತ್ತು. ಎನ್‌ಪಿಪಿ 18, ಯುಡಿಪಿ 9 ಮತ್ತು ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದು ಕೊಂಡಿವೆ. 2003ರಿಂದ ಮೇಘಾಲಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ