ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಮಾ-3: ರಾಜ್ಯ ಸರ್ಕಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಚುನಾವಣೆ ಆಯೋಗದ ಒಪ್ಪಿಗೆ ಪಡೆದು ರೋಹಿಣಿಯವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಸಿಂಧೂರಿ ವರ್ಗಾವಣೆ ಆದಾಗ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ವರ್ಗಾವಣೆ ಆದೇಶ ಹಿಂಪಡೆಯಲಾಗಿತ್ತು.

ಮೈಸೂರು ಜಿಲ್ಲಾಧಿಕಾರಿ ರಂದೀಪ್‌ ಅವರನ್ನು ಹಾಸನ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಇನ್ನು ವರ್ಗಾವಣೆಯಾದ ಇತರ ಅಧಿಕಾರಿಗಳೆಂದರೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಂಕರ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ನಗರಕ್ಕೆ ಜಿಲ್ಲಾಧಿಕಾರಿಯಾಗಿ ದಯಾನಂದ್‌ ಅವರನ್ನು ನೇಮಕ ಮಾಡಲಾಗಿದೆ.

ವಿಜಯಪುರ ಜಿಲ್ಲಾಧಿಕಾರಿಯಾಗಿ ಶೆಟ್ಟಣ್ಣನವರ್‌, ರಾಮನಗರಕ್ಕೆ ಕ್ಯಾಪ್ಟನ್‌ ರಾಜೇಂದ್ರ , ಚಾಮರಾಜ ನಗರಕ್ಕೆ ಕಾವೇರಿ ಮತ್ತು ಯುವಜನ ಸೇವಾ ಆಯುಕ್ತೆಯಾಗಿ ಮಮತಾ ಅವರನ್ನು ವರ್ಗಾವಣೆ ಮಾಡಲಾಗಿದೆ.

ಜನವರಿ 22ರಂದು ರೋಹಿಣಿ ಸಿಂಧೂರಿ ಸೇರಿ 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ನೀಡಿದ್ದ ಆದೇಶಕ್ಕೆ ಚುನಾವಣಾ ಆಯೋಗ ತಡೆ ನೀಡಿತ್ತು. ಈ ವಿಚಾರದಲ್ಲಿ ಆಯೋಗ ತಲೆ ಹಾಕಬಾರದು, ಚುನಾವಣೆ ನೀತಿ ಸಂಹಿತೆ ಜಾರಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರೆ. ಆದರೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಸಂದರ್ಭದಲ್ಲಿ ವರ್ಗಾವಣೆ ಕೂಡದು ಎಂದು ಆಯೋಗ ಸರ್ಕಾರಕ್ಕೆ ಸ್ಪಷ್ಟಪಡಿಸಿತ್ತು. ಇದೇ ವೇಳೆ ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈಗ ಅಂತಿಮವಾಗಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

transfer of everal IAS officers, hassan dc,rohini sindhuri

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ