ನವದೆಹಲಿ: ಮಾ-3: ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂದ್ ಹಾಗೂ ಮೆಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದಂತೆ ಸರ್ಕಾರ ರಚನೆ ಕಸರತ್ತುಗಳು ಆರಂಭವಾಗಿದೆ.
ತ್ರಿಪುರಾದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಪಕ್ಷದ ಕಚೇರಿಗೆ ಆಗಮಿಸಿದ್ದು, ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದಾರೆ.
ಪಕ್ಷದ ಕಛೇರಿಗೆ ಆಗಮಿಸಿದ ಅಮಿತ್ ಶಾ ಅವರನ್ನು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೂವು ಚೆಲ್ಲಿ ಸ್ವಾಗತಿಸಿದರು. ಈ ವೇಳೆ ಶಾ ವಿಜಯದ ನಗೆಯೊಂದಿಗೆ ಜನರತ್ತ ಕೈ ಬೀಸಿಸಾಗಿದರು.
ಈ ವೇಳೆ ಮಾತನಾಡಿದ ಅಮಿತ್ ಶಾ, ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಈಶಾನ್ಯ ರಾಜ್ಯಗಳ ಅಭಿವೃದ್ಧಿಪರ ಹಾಗೂ ಬದ್ಧತೆಗೆ ಸಂದ ವಿಜಯ. ಸಾಮೂಹಿಕವಾಗಿ ಬಿಜೆಪಿಯನ್ನು ಬೆಂಬಲಿಸಿದ ತ್ರಿಪುರದ ಸಹೋದರ, ಸಹೋದರಿಯರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಇನ್ನು ಪಕ್ಷದಿಂದ ಗೆಲುವು ಪಡೆದ ಮುಖಂಡರಿಗೆ ಶುಭಕೋರಿರುವ ಶಾ, ಬಿಜೆಪಿ ಹಾಗೂ ಕಾರ್ಯಕರ್ತರ ಸಾಂಘಿಕ ಕಠಿಣ ಪರಿಶ್ರಮ ಹಾಗೂ ತೊಡಗಿಸಿಕೊಳ್ಳುವಿಕೆಯಿಂದ ಐತಿಹಾಸಿಕ ಗೆಲುವು ಲಭಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
Tripura,BJP,victory, Amit Shah