ಕಾರು ಮತ್ತು ಬೈಕ್ ನಡುವೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ
ತುಮಕೂರು, ಮಾ.4-ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮಧುಗಿರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರ ಮೂಲದ ಮಡಕಶಿರಾದ ನಿವಾಸಿ ಅಂಬರೀಶ್(32) ಮೃತಪಟ್ಟ ಬೈಕ್ ಸವಾರ.
ಇಂದು ಬೆಳಗ್ಗೆ ಅಂಬರೀಶ್ ತನ್ನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮಧುಗಿರಿ ಹಿಂದೂಪುರ ರಸ್ತೆಯ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಅಂಬರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದು , ಹಿಂಬದಿ ಸವಾರನನ್ನು ತುಮಕೂರಿನ ಅಸ್ಪತ್ರೆಗೆ ರವಾನಿಸಲಾಗಿದೆ.
ಮಧುಗಿರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.