ಬೆಂಗಳೂರು, ಮಾ.4-ಬೆಂಗಳೂರಿನ ಗಾಂಧಿನಗರದಲ್ಲಿರುವ ಅಕಾಡೆಮಿ ಆಫ್ ಪ್ರಿಸನ್ ಅಡ್ಮಿನಿಸ್ಟ್ರೇಷನ್ ಸಂಸ್ಥೆಯ ನಿವೇಶನದ ಸುತ್ತಲೂ ಅಗತ್ಯವಿರುವ ಕಾಂಪೌಂಡ್ ಗೋಡೆ ನಿರ್ಮಿಸಲು 1.48 ಕೋಟಿ ರೂ. ಬಿಡುಗಡೆ ಮಾಡಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.
2010ರ ಫೆ.3ರ ಅಂದಾಜು ಪಟ್ಟಿಯಂತೆ ಕಾಮಗಾರಿಯನ್ನು ಪ್ರಾರಂಭಿಸಿ ಕೆಟಿಪಿಪಿ ಕಾಯ್ದೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಷರತ್ತು ವಿಧಿಸಲಾಗಿದೆ.