ಮೆಘಾಲಯದಲ್ಲಿ ಅತಂತ್ರ ವಿಧಾನ ಸಭೆ ಹಿನ್ನಲೆ: ಸರ್ಕಾರ ರಚನೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರ ಮನವಿ

ಶಿಲ್ಲಾಂಗ್:ಮಾ-4: ಮೆಘಾಲಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಆದರೆ ಕಾಂಗ್ರೆಸ್ ಪಕ್ಷ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

60 ಕ್ಷೇತ್ರಗಳ ಮೇಘಾಲಯ ವಿಧಾನಸಭಾ ಚುನಾವಣೆ ಫಲಿತಾಂಶ ಶನಿವಾರ ಪ್ರಕಟಗೊಂಡಿದೆ. 21 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 2, ಎನ್‌ಎನ್‌‌ಪಿ 19 ಹಾಗೂ ಇತರರು 11 ಕ್ಷೇತ್ರಗಳನ್ನು ಪಡೆದಿದ್ದಾರೆ.

ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾದ ಅಹ್ಮದ್‌ ಪಟೇಲ್‌ ಹಾಗೂ ಕಮಲ್‌ನಾಥ್‌ ಮೇಘಾಲಯಕ್ಕೆ ದೌಡಾಯಿಸಿದ್ದಾರೆ. ಶನಿವಾರ ರಾತ್ರಿಯೇ ರಾಜ್ಯಪಾಲ ಗಂಗಾಪ್ರಸಾದ್‌ ಅವರನ್ನು ಕಾಂಗ್ರೆಸ್‌ ಭೇಟಿಯಾಗಿ ಸರ್ಕಾರ ರಚನೆಗೆ ತಮ್ಮ ಪಕ್ಷವನ್ನು ಆಹ್ವಾನಿಸುವಂತೆ ಕೋರಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಮಲ್‌ನಾಥ್‌, ನಾವು ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚಿಸಲು ಕಾಂಗ್ರೆಸ್‌‌ಗೆ ಆಹ್ವಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಜನಾದೇಶವನ್ನು ಗೌರವಿಸಬೇಕು. ಬಿಜೆಪಿ ಕೇವಲ 2 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದ್ದು, ಆ ಪಕ್ಷವನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ ಎಂಬುವುದು ಸಾಬೀತಾಗಿದೆ ಎಂದೂ ಕಮಲ್‌ನಾಥ್‌ ಹೇಳಿದ್ದಾರೆ.
Meghalaya, assembly elections 2018, Congress,Kamal Nath

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ