ಮುಜಾಫರ್ನಗರ್, ಮಾ.4-ಈಶಾನ್ಯ ಪ್ರಾಂತ್ಯದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಪ್ರಾಬಲ್ಯದಿಂದ ಸಂತುಷ್ಟರಾಗಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲಾ ಮುಖಂಡರೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮುಜಾಫರ್ನಗರ ಜಿಲ್ಲಾ ಘಟಕದ ಉಪಾಧ್ಯಕ್ಷ ಬುಧಾನ್ ಸಿಂಗ್(54) ಮೃತಪಟ್ಟವರು. ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಸಾಧನೆಗೆ ಪಕ್ಷದ ಕಚೇರಿಯಲ್ಲಿ ವಿಜಯೋತ್ಸವ ಆಚರಿಸುತ್ತಿದ್ದಾಗ, ಹಠಾತ್ ಕುಸಿದು ಬಿದ್ದರು. ಅವರನ್ನು ಹತ್ತಿರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದರು.
ಬುಧಾನ್ ಸಿಂಗ್ ನಿಷ್ಠಾವಂತ ಮುಖಂಡರಾಗಿದ್ದು, ಜಿಲ್ಲಾ ಮಟ್ಟದಲ್ಲಿ ಬಿಜೆಪಿ ಬಲವರ್ಧನೆಗೆ ಶ್ರಮಿಸಿದ್ದರು ಎಂದು ಪಕ್ಷದ ಜಿಲ್ಲಾಧ್ಯಕ್ಷ ರೂಪೇಂದರ್ ಸಿಂಗ್ ಹೇಳಿದ್ದಾರೆ.