ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯಿಂದ ಕೊಲೆ
ಗದಗ,ಮಾ.4- ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದ್ದು, ತಡರಾತ್ರಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿಯೇ ಕೊಲೆ ಮಾಡಿರುವ ಘಟನೆ ಲಕ್ಷ್ಮೇಶ್ವರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದ ಶಿವಲೀಲಾ ಪಟ್ಟೇದ (30) ಕೊಲೆಯಾದ ಮಹಿಳೆ.
ಈ ಗ್ರಾಮದಲ್ಲಿ ವಾಸವಾಗಿದ್ದ ನಾಗರಾಜ್-ಶಿವಲೀಲಾ ಪಟ್ಟೇದ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ನಿನ್ನೆ ಸಂಜೆಯೂ ದಂಪತಿ ನಡುವೆ ಜಗಳವಾಗಿದ್ದು, ತಡರಾತ್ರಿ ನಿದ್ದೆಗೆ ಜಾರಿದ್ದ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪತಿ ನಂತರ ಪೆÇಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಲಕ್ಷ್ಮೇಶ್ವರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.