ಬೆಂಗಳೂರು, ಮಾ.4-ಮೇಯರ್ ಸಂಪತ್‍ರಾಜ್ ಮಾತನಾಡಿ, ಮಾಧ್ಯಮಗಳು ಸುದ್ದಿ ಸಂಗತಿಗಳ ವಿಷಯದಲ್ಲಿ ಕಣ್ಗಾವಲಿನಂತೆ ಕೆಲಸ ಮಾಡುತ್ತವೆ. ಎಲ್ಲ ಕ್ಷೇತ್ರಗಳಲ್ಲೂ ಟೀಕೆ-ಟಪ್ಪಣಿಗಳು ಸಹಜ. ಮಾಧ್ಯಮದವರ ಪಾತ್ರ ಮತ್ತು ಜವಾಬ್ದಾರಿ ದೊಡ್ಡದು ಎಂದು ಪ್ರಶಂಸಿಸಿದರು.
ಪತ್ರಕರ್ತರು ಮತ್ತು ಮಾಧ್ಯಮದವರ ಕಲ್ಯಾಣಕ್ಕಾಗಿ ವೈದ್ಯಕೀಯ ನಿಧಿಗೆ 1 ಕೋಟಿ ರೂ.ಗಳು ಹಾಗೂ ಮಾಧ್ಯಮ ಕೇಂದ್ರ ಸ್ಥಾಪನೆಗೆ 2 ಕೋಟಿ ರೂ.ಗಳ ಅನುದಾನವನ್ನು ಬಿಬಿಎಂಪಿ ಬಜೆಟ್‍ನಲ್ಲಿ ಮೀಸಲಿರಿಸಲಾಗಿದೆ ಎಂದು ಮಹಾಪೌರರು ಇದೇ ಸಂದರ್ಭದಲ್ಲಿ ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು, ನ್ಯೂಸ್ ಮೀಡಿಯಾ ಅಸೋಸಿಯೇಷನ್ ಆಫ್ ಕರ್ನಾಟಕದ ಅಧ್ಯಕ್ಷ ವೆಂಕಟೇಶ್ ಪೈ, ಉಪಾಧ್ಯಕ್ಷ ಸುಧಾಕರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
ಇದಕ್ಕೂ ಮುನ್ನ ಖ್ಯಾತ ಗಾಯಕ ಕಡಬೂರು ಮುನಿರಾಜು ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.