ಮಾ.6ರಂದು ಕರ್ನಾಟಕ ದಲಿತ ಉದ್ದಿಮೆದಾರರ ಸಮಾವೇಶ

Varta Mitra News

ಮಾ.6ರಂದು ಕರ್ನಾಟಕ ದಲಿತ ಉದ್ದಿಮೆದಾರರ ಸಮಾವೇಶ
ಬೆಂಗಳೂರು,ಮಾ.4- ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಎಂಟರ್‍ಪ್ರೈನರ್ಸ್ ಮತ್ತು ಇಂಡಸ್ಟ್ರಿಯಲಿಸ್ಟ್ ಅಸೋಸಿಯೇಷನ್ ಕರ್ನಾಟಕ ಸರ್ಕಾರದ ಆಶ್ರಯದಲ್ಲಿ ಕರ್ನಾಟಕ ದಲಿತ ಉದ್ದಿಮೆದಾರರ ಸಮಾವೇಶವನ್ನು ಮಾ.6ರಂದು ಸಂಜೆ 6 ಗಂಟೆಗೆ ಕುಮಾರಕೃಪ ರಸ್ತೆ ಬಳಿಯ ದಿ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ಆಯೋಜಿಸಲಾಗಿದೆ.
ಸಮಾವೇಶದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ವಹಿಸಲಿದ್ದು, ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಚಿವರಾದ ಹೆಚ್.ಆಂಜನೇಯ, ರಮೇಶ್ ಜಾರಕಿಹೊಳಿ, ಪ್ರಿಯಂಕ.ಎಂ ಖರ್ಗೆ, ಆರ್.ಬಿ.ತಿಮ್ಮಾಪುರ ಭಾಗವಹಿಸಲಿದ್ದಾರೆ ಎಂದು ಅಸೋಸಿಯೇಷನ್‍ನ ಕಾರ್ಯಾಧ್ಯಕ್ಷ ಸಿ.ಜಿ.ಶ್ರೀನಿವಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ