ಉದ್ಯೋಗ ಮೇಳ
ಬೆಂಗಳೂರು,ಮಾ.4- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಖಾಸಗಿ ಕಂಪನಿಗಳ ಸಹಯೋಗದಲ್ಲಿ ಇದೇ 10ರಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಬ್ಯಾಟರಾಯನಪುರದ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿರುವ ದೇವ್-ಇನ್ ಕಾಲೇಜುನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮೇಳದಲ್ಲಿ 100ಕ್ಕೂ ಹೆಚ್ಚು ಹೆಸರಾಂತ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು , ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸ್ಥಳದಲ್ಲೇ ನೇರ ಆಯ್ಕೆ ಮಾಡಲಿದ್ದಾರೆ.
ಅಕ್ಷರಸ್ಥರು, ಅನಕ್ಷರಸ್ಥ ನಿರದ್ಯೋಗಿಗಳಿಗೆ ಉದ್ಯೋಗವಕಾಶಗಳಿದ್ದು , ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ವಿವರಗಳೊಂದಿಗೆ ನೇರಸಂದರ್ಶನಕ್ಕೆ ಹಾಜರಾಗಬಹುದು.
ಸಂದರ್ಶನವು ದೇವ್-ಇನ್-ಕಾಲೇಜು, ಕೊಡಿಗೇಹಳ್ಳಿ ಮುಖ್ಯರಸ್ತೆ,ಸಹಕಾರ ನಗರ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ, ಬೆಂಗಳೂರು-560092 ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೆ.ಎಂ.ಸನತ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ: 22289668, 22259351 ಸಂಪರ್ಕಿಸಬಹುದು.