ಬೆಂಗಳೂರು: ಬೀದರ್ ದಕ್ಷಿಣ ಕ್ಷೇತ್ರದ ಶಾಸಕ, ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಭಾರೀ ಕುತೂಹಲ ಹುಟ್ಟು ಹಾಕಿದೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಸಮ್ಮುಖದಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ ಪಕ್ಷ ಸೇರಿದರು. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಮಕ್ಕಳ ಪಕ್ಷದಿಂದ ಬೀದರ್ ದಕ್ಷಿಣ ಕ್ಷೇತ್ರದಿಂದ 2013ರ ಚುನಾವಣೆಗೆ ಸ್ಪರ್ಧಿಸಿದ್ದ ಅಶೋಕ್ ಖೇಣಿ ಜಯಗಳಿಸಿದ್ದರು. 47,763 ಮತಗಳನ್ನು ಪಡೆದು ಜೆಡಿಎಸ್‌ನ ಬಂಡೆಪ್ಪ ಕಾಶೆಂಪುರ ಅವರನ್ನು ಸೋಲಿಸಿದ್ದರು.