ಬೀದರ್, ಮಾ.5-ಮೆಡಿಕಲ್ ವಿದ್ಯಾರ್ಥಿನಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ನ ಹುಮ್ನಾಬಾದ್ ತಾಲೂಕಿನ ಚಿಟಗುಪ್ಪ ಪಟ್ಟಣದ ಬ್ರೀಮ್ಸ್ ಮೆಡಿಕಲ್ ಕಾಲೇಜಿನ ಉಮಾದೇವಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬ್ರೀಮ್ಸ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿಯೇ ಇದ್ದುಕೊಂಡು 3ನೆ ಸೆಮಿಸ್ಟರ್ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು.
ರಾತ್ರಿ ಹಾಸ್ಟೆಲ್ನಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣವೇ ಈಕೆಯನ್ನು ಸಹಪಾಠಿಗಳು ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಸ್ಥಳೀಯ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.