ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮಾ.5-ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ ಹಾಗೂ ತ್ರಿಪುರಾ ಚುನಾವಣಾ ಫಲಿತಾಂಶ ಇಲ್ಲಿ ಪರಿಣಾಮ ಬೀರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಒಂದು ವೇಳೆ ಕೇಸರಿ ಪಕ್ಷ ರಾಜ್ಯದ ಚುನಾವಣೆಯಲ್ಲಿ ಜಯಸಿದ್ದೇ ಆದರೆ, ಅಕ್ರಮ ಭೂ ಡಿನೋಟಿಫಿಕೇಷನ್ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು ಸ್ಥಿರ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವ ಬಗ್ಗೆ ಜನರಿಗೆ ಹೇಗೆ ಮನವರಿಕೆ ಮಾಡಿಕೊಡುತ್ತಾರೆ ಎಂಬ ಬಗ್ಗೆ ಬಿಜೆಪಿ ಚಿಂತಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಟೀಕಿಸಿದ್ದಾರೆ.
ರಾಜ್ಯದಲ್ಲಿ ತ್ರಿಪುರಾ ಚುನಾವಣಾ ಫಲಿತಾಂಶ ಪ್ರಭಾವ ಬೀರುವುದಿಲ್ಲ. ಇಲ್ಲಿ ಮೋದಿ ಅಲೆಯಂತೂ ಇಲ್ಲವೇ ಇಲ್ಲ. 2014ರ ಸಂಸತ್ ಚುನಾವಣೆ ನಂತರ ಬಿಜೆಪಿ ಸುಮಾರು 50 ಲೋಕಸಭಾ ಕ್ಷೇತ್ರಗಳಲ್ಲಿ ವಿಧಾನಸಭಾ ಸ್ಥಾನಗಳನ್ನು ಕಳೆದುಕೊಂಡಿದ್ದು. ಅದು ಎರಡು ಲೋಕಸಭಾ ಸ್ಥಾನಗಳನ್ನೂ ಮಾತ್ರ ಗೆದ್ದಿದೆ. ಇದನ್ನು ಗಮನಿಸಿದರೆ ರಾಜ್ಯದಲ್ಲಿ ಮೋದಿ ಹವಾ ಇಲ್ಲ ಎಂದು ಅವರು ವಿಶ್ಲೇಷಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ