
ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.
ದಕ್ಷಿಣ ಶೋಪಿಯಾನ್ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ ನಿನ್ನೆ ರಾತ್ರಿ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಅಲ್ಲದೇ ಗುಂಡೇಟಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ಗುಂಡಿನ ಕಾಳಗದಲ್ಲಿ ಹತರಾದವರಲ್ಲಿ ಇಬ್ಬರು ಎಲ್ ಇ ಟಿ ಉಗ್ರರು ಮತ್ತು ಇತರರು ನಾಲ್ವರು ಎಂದು ಸೇನೆ ತಿಳಿಸಿದೆ. ಗುಂಡೇಟಿನಿಂದ ತುಂಬಿದ್ದ ಶವವನ್ನು ಲಷ್ಕರ್ ಎ ತಯ್ಯಬ ಸಂಘಟನೆಯ ಉಗ್ರ ಆಶಿಕ್ ಹಸೇನ್ ಭಟ್ ನದ್ದೆಂದು ಗೊತ್ತಾಗಿದೆ. ಇಂದು ಪತ್ತೆಯಾದ ಹತ ಉಗ್ರನನ್ನು ಶೋಪಿಯಾನ್ನ ಜಾಮ್ನಗರೀ ಗ್ರಾಮದ ನಿವಾಸಿಯಾಗಿರುವ ಶಾಹೀದ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಸೇನೆಯ ಗುಂಡಿಗೆ ಬಲಿಯಾದ ಪೌರರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ.
ಸೇನೆಯ 44ನೇ ರಾಷ್ಟ್ರೀಯ ರೈಫಲ್ ಪಡೆ ಮತ್ತು ಉಗ್ರರ ನಡುವೆ ಪಹನೂ ಎಂಬಲ್ಲಿಂದ ಹತ್ತು ಕಿ.ಮೀ. ದೂರದ ಸೈದಾಪೋರಾದಲ್ಲಿನ ಆ್ಯಪಲ್ ತೋಟವೊಂದರಲ್ಲಿ ರಾತ್ರಿ ಗುಂಡಿನ ಕಾಳಗ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಗುಂಡಿಗೆ ಆರು ಮಂದಿ ಹತರಾದುದನ್ನು ಅನುಸರಿಸಿ ಶೋಪಿಯಾನ್ನ ಹಲವು ಭಾಗಗಳಲ್ಲಿ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.
2 let-militants,4-others shot dead,shopian,jammu-kashmir