ಕೊಳ್ಳೇಗಾಲ, ಮಾ.5- ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮಲಪುರ ನಿವಾಸಿ ಮಧು(30) ಆತ್ಮಹತ್ಯೆ ಮಾಡಿಕೊಂಡ ಯುವಕ.
ಉತ್ತಮ ವಿದ್ಯಾಭ್ಯಾಸ ಮಾಡಿದ್ದ ಮಧು ಸರ್ಕಾರಿ ಹುದ್ದೆಗೆ ಅರ್ಜಿಗಳನ್ನು ಹಾಕಿದ್ದು, ಕೆಲಸ ಸಿಗುತ್ತದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದನು. ಹಲವಾರಿ ಬಾರಿ ಪ್ರಯತ್ನಿಸಿದರೂ ಸರ್ಕಾರಿ ನೌಕರಿಸಿಗದ ಕಾರಣ ಮನನೊಂದು ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಯಳಂದೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.