ಸಿದಂಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದ ಡಾ.ಜಿ.ಎಸ್.ಮಾಲಿ ಪಾಟೀಲ್
ಬೆಂಗಳೂರು,ಮಾ.5- ವಿಜಯಪುರ ಜಿಲ್ಲೆಯ ಸಿದಂಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಡಾ.ಜಿ.ಎಸ್.ಮಾಲಿ ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ ತಿಂಗಳಿನಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುತ್ತೇನೆ. ಒಂದು ವೇಳೆ ಟಿಕೆಟ್ ಪಡೆದು ಶಾಸಕನಾಗಿ ಸೇವೆ ಸಲ್ಲಿಸುವ ಭಾಗ್ಯ ದೊರೆತರೆ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಸಂಪೂರ್ಣ ಬೆಂಬಲ ಕೊಟ್ಟರು. ರೈತ ವರ್ಗ, ವಿದ್ಯಾರ್ಥಿಗಳು ನಿರುದ್ಯೋಗಿ ಪದವಿಧರರ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಕಷ್ಟಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಕಳೆದ 40 ವರ್ಷಗಳಿಂದ ಇಂದಿನವರೆಗೆ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಟಾವಂತವಾಗಿ ಕಾರ್ಯ ಸಲ್ಲಿಸಿರುತ್ತೇನೆ. ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲೂ ಸಹ ಆಕಾಂಕ್ಷಿಯಾಗಿದ್ದೇನೆ. ಟಿಕೆಟ್ ಸಿಗದೆ ಇದ್ದರೂ ಸಕ್ರಿಯವಾಗಿ ಪಕ್ಷದಲ್ಲಿ ಮುಂದುವರೆಯುತ್ತೆನೆ. ದಯಾಮಾಡಿ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಶಾಸಕನಾಗಲು ಆಶೀರ್ವದಿಸಿ ಎಂದು ಸಿದಂಗಿ ವಿಧಾನಸಭಾ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು.