ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು
ಬೆಂಗಳೂರು, ಮಾ.5-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಗಳು ಯಾರೆಂಬುದನ್ನು ಪತ್ತೆಹಚ್ಚಲಾಗಿದೆ. ಅವರನ್ನು ಬಂಧಿಸುವ ಪ್ರಕ್ರಿಯೆ ಬಾಕಿ ಇದ್ದು, ಇವರ ಬಂಧನಕ್ಕೆ ಕೆಲವು ಸಾಕ್ಷಾಧಾರಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಸೂಕ್ತ ಸಾಕ್ಷಾಧಾರಗಳು ಲಭ್ಯವಾದಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದರು.
ತನಿಖೆ ಬಹಳಷ್ಟು ಪ್ರಗತಿಯಲ್ಲಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ. ಗೌರಿಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳಿಗೆ ಯಾರು ಆಶ್ರಯ ನೀಡಿದ್ದಾರೆ ? ರೈಫಲ್ ನೀಡಿದವರು ಯಾರು ಎಂಬಿತ್ಯಾದಿ ಮಾಹಿತಿಗಳು ಲಭ್ಯವಾಗಿವೆ. ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಗಾಗಲೇ ಎಸ್‍ಐಟಿ ತಂಡ ನವೀನ್‍ಕುಮಾರ್‍ನನ್ನು ವಶಕ್ಕೆ ಪಡೆದು ಹಲವು ಮಾಹಿತಿಗಳನ್ನು ಕಲೆಹಾಕಿದೆ. ಹೆಚ್ಚಿನ ಮಾಹಿತಿಗಾಗಿ ಈತನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ