ಬೆಂಗಳೂರು, ಮಾ.5-ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇದೇ 7ರಂದು 3 ಗಂಟೆಗೆ ಕಾಸಿಯಾ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾಸಿಯಾ ಅಧ್ಯಕ್ಷ ಆರ್.ಹನುಮಂತೇಗೌಡ ಅವರು ಅಧ್ಯಕ್ಷತೆ ವಹಿಸಲಿದ್ದು, ಗೌರವ ಉಪಾಧ್ಯಕ್ಷ ಬಸವರಾಜ್ ಎಸ್.ಜವಳಿ, ನಿಕಟಪೂರ್ವ ಅಧ್ಯಕ್ಷ ಎ.ಪದ್ಮನಾಭ, ಗೌರವ ಪ್ರಧಾನಕಾರ್ಯದರ್ಶಿ ಟಿ.ಎಸ್.ಉಮಾಶಂಕರ್, ಲತಾ ಗಿರೀಶ್, ಮಂಜುನಾಥ್, ನರಸಿಂಹಮೂರ್ತಿ, ಅರಸಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.






